ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿ ನಿಲಯಗಳ ಮಾಹಿತಿ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ಪರಿಚಯ
ಹಿಂದುಳಿದ ವರ್ಗಗಳ ಆಯೋಗವು ಸರ್ಕಾರಕ್ಕೆ ಸಲ್ಲಿಸಿದ ವರದಿಯು ಅಂಗೀಕೃತವಾದ್ದರಿಂದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಸರ್ವಾಂಗೀಣ ಅಭಿವೃದ್ಧಿಗಾಗಿ ಪ್ರತ್ಯೇಕ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆಯನ್ನು 1977ನೇ ಸಾಲಿನಲ್ಲಿ ಪ್ರಾರಂಭಿಸಲಾಯಿತು. ಇಲಾಖೆ ಮೂಲಕ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಲಾಗುತ್ತಿದೆ.
ಭಾರತೀಯ ಸಂವಿಧಾನದ ಅನುಚ್ಛೇದ 15(4)ರನ್ವಯ ಶೈಕ್ಷಣಿಕ ಕ್ಷೇತ್ರದಲ್ಲಿ, ಅನುಚ್ಛೇದ 16(4)ರನ್ವಯ ಔದ್ಯೋಗಿಕ ಕ್ಷೇತ್ರದಲ್ಲಿ ಹಿಂದುಳಿದ ವರ್ಗಗಳ ಜನಾಂಗದವರಿಗೆ ಮೀಸಲಾತಿಯನ್ನು ಕಲ್ಪಿಸಲಾಗಿದೆ. ಸರ್ಕಾರದ ಆದೇಶ ಸಂಖ್ಯೆ/ಸಕಇ/225/ಬಿಸಿಎ 2000 ದಿನಾಂಕ-30-3-2002ರ ಅನುಸಾರ ಪ್ರಸಕ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳು, ಹಾಗೂ ಹಿಂದುಳಿದ ವರ್ಗಗಳಿಗೆ ಶೇಕಡಾ 50% ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ಅದರಲ್ಲಿ ಹಿಂದುಳಿದ ವರ್ಗದವರಿಗೆ ಶೇಕಡಾ 32% ರಷ್ಟು ಮೀಸಲಾತಿ ಸೌಲಭ್ಯ ಒದಗಿಸಲಾಗಿದೆ.
ಆಡಳಿತ ವಿಧಾನ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯಕ್ರಮಗಳನ್ನು ಪ್ರಸ್ತುತ ಜಿಲ್ಲಾ ಹಂತದಲ್ಲಿ ಜಿಲ್ಲಾ ಪಂಚಾಯತ್ ಮೂಲಕ ಕಾರ್ಯಗತಗೊಳಿಸಲಾಗುತ್ತಿದೆ. ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಮಾನ್ಯ ಜಿಲ್ಲಾಧಿಕಾರಿಗಳು, ಶಿವಮೊಗ್ಗ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧೀನದಲ್ಲಿ ಹಾಗೂ ಮಾರ್ಗದರ್ಶನದಲ್ಲಿ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ.
ತಾಲ್ಲೂಕು ಹಂತದಲ್ಲಿ ಪ್ರತ್ಯೇಕ ತಾಲ್ಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಛೇರಿ ಇದ್ದು, ಇಲಾಖಾ ಕಾರ್ಯಕ್ರಮಗಳ ಅನುಷ್ಟಾನಾಧಿಕಾರಿಗಳಾಗಿರುತ್ತಾರೆ. ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಾರೆ. ವಿದ್ಯಾರ್ಥಿನಿಲಯಗಳ ತಪಾಸಣೆ, ವಿದ್ಯಾರ್ಥಿವೇತನ ಮಂಜೂರಾತಿ, ಶೈಕ್ಷಣಿಕ ಸಂಸ್ಥೆಗಳ ತಪಾಸಣೆ, ಘಟಕ ಕಛೇರಿಗಳ ತಪಾಸಣೆ, ಸಿಂಧುತ್ವ ಪ್ರಮಾಣ ಪತ್ರ ನೀಡಿಕೆಗೆ ಸಂಬಂಧಿಸಿದಂತೆ ಸ್ಥಳ ತನಿಖೆ ನಡೆಸುವುದು, ಜಿಲ್ಲಾ ಕಛೇರಿಯಿಂದ ಸೂಚಿಸಲಾದ ಮಾಹಿತಿ ಸಲ್ಲಿಸುವುದು ಇತ್ಯಾದಿಗಳು ಇವರ ಪ್ರಮುಖ ಜವಬ್ದಾರಿಗಳಾಗಿರುತ್ತದೆ.
ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತ ಊಟ, ವಸತಿ ಹಾಗೂ ಇತರೆ ಸೌಕರ್ಯಗಳನ್ನೊಳಗೊಂಡ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ನಿರ್ವಹಿಸಲಾಗುತ್ತಿದೆ. ಹಾಗೆಯೇ ಜಿಲ್ಲೆಯಲ್ಲಿ ಆರು ಮೊರಾರ್ಜಿ ದೇಸಾಯಿ ವಸತಿಶಾಲೆಗಳು, ಎರಡು ಇಂದಿರಾಗಾಂಧಿ ವಸತಿಶಾಲೆಗಳು ಹಾಗೂ ಒಂದು ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜನ್ನು ಇಲಾಖಾ ವತಿಯಿಂದ ನಿರ್ವಹಿಸಲಾಗುತ್ತಿದೆ.
ರಾಜ್ಯ ವಲಯದ ಯೋಜನೆಗಳು
- ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ
- ಶುಲ್ಕ ಮರುಪಾವತಿ
- ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ
- ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಹೆೊಸ ವಿದ್ಯಾರ್ಥಿನಿಲಯಗಳ ಪ್ರಾರಂಭ ಮತ್ತು ನಿರ್ವಹಣೆ
- ವಿದ್ಯಾಸಿರಿ, ಆಹಾರ ಮತ್ತು ವಸತಿ ಯೋಜನೆ
- ಅಲೆಮಾರಿ/ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ
- ಅಲೆಮಾರಿ/ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ
- ಅಲೆಮಾರಿ/ಅರೆಅಲೆಮಾರಿ ಜನಾಂಗದ ಕಾಲೊನಿಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ
- 2019-20ನೆೇ ಸಾಲಿನ ಅಲೆಮಾರಿ/ಅರೆಅಲೆಮಾರಿ ಅಭಿವೃದ್ಧಿ ಯೋಜನೆಯಡಿ ಅಲೆಮಾರಿ ಜನಾಂಗದವರು ವಾಸಿಸಿರುವ ಕಾಲೋನಿಗಳಲ್ಲಿ ಸಿ.ಸಿ. ರಸ್ತೆ ಮತ್ತು ಚರಂಡಿ ನಿರ್ಮಾಣ
- ತಾಲ್ಲೂಕಿನಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಕಛೇರಿಗಳು
- ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರ
- ನರ್ಸಿಂಗ್ ತರಭೇತಿ ಭತ್ಯೆ
- ಪಿ. ಹೆಚ್.ಡಿ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮಾಸಿಕ ತಲಾ 10000/- ದಂತೆ
- ವಿದ್ಯಾರ್ಥಿನಿಲಯಗಳಲ್ಲಿರುವ ನಿಲಯಾರ್ಥಿಗಳಿಗೆ IAS/IPS/BANKING ಸ್ಪರ್ಧಾತ್ಮಕ ಪರೀಕ್ಷೆಗಾಗಿ ಮಾರ್ಗದರ್ಶನ
- ವಿದ್ಯಾರ್ಥಿನಿಲಯಗಳ ಕಟ್ಟಡ ನಿರ್ಮಾಣ(ನಿವೇಶನ ಖರೀದಿ, ಕಟ್ಟಡ ದುರಸ್ಥಿ, ಹೆಚ್ಚುವರಿ ಕೊಠಡಿ ನಿರ್ಮಾಣ, ಹೆಚ್ಚುವರಿ ಕಟ್ಟಡ ನಿರ್ಮಾಣ)
- ದೇವರಾಜ ಅರಸು ಭವನ ನಿರ್ಮಾಣ
- ವಿವಿಧ ಸಮುದಾಯಗಳ ಅಭಿವೃದ್ಧಿ
ಜಿಲ್ಲಾ ವಲಯದ ಯೋಜನೆಗಳು
- ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ನಿರ್ವಹಣೆ
- ಇತರೆ ಹಿಂದುಳಿದ ವರ್ಗಗಳಿಗೆ ಶುಲ್ಕ ವಿನಾಯಿತಿ
- ಕಾರ್ಯನಿರ್ವಾಹಕ ಸಿಬ್ಬಂಧಿ
- ಕಟ್ಟಡಗಳ ವೆಚ್ಚ ಮತ್ತು ನಿರ್ವಹಣೆ
- ಹೊಲಿಗೆ ತರಬೇತಿ ಕೇಂದ್ರಗಳ ನಿರ್ವಹಣೆ
- ದೇವರಾಜ ಅರಸು ಜನ್ಮ ದಿನಾಚರಣೆ
- ವಕೀಲರಿಗೆ ಶಿಷ್ಯವೇತನ
- ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ
- ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಸುಧಾರಣೆ
- ತಾಲ್ಲೂಕು ವಿಸ್ತರಣಾ ಕಛೇರಿಗಳು
- ಹೊಲಿಗೆ ತರಬೇತಿ ಕೇಂದ್ರಗಳು
- ವಿದ್ಯಾರ್ಥಿನಿಲಯಗಳಲ್ಲಿರುವವರಿಗೆ ಪ್ರೋತ್ಸಹಧನ
ಕುಮಾರ
ಜಿಲ್ಲಾ ಅಧಿಕಾರಿ,
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಶಿವಮೊಗ್ಗ
ದೂರವಾಣಿ : (08182) 222129
ಶಿವಮೊಗ್ಗ | ಭದ್ರಾವತಿ | ತೀರ್ಥಹಳ್ಳಿ | ಹೊಸನಗರ | ಸಾಗರ | ಸೊರಬ | ಶಿಕಾರಿಪುರ |
08182-240078 | 08282-264644 | 08181-298096 | 08185-221051 | 08183-220274 | 08184-272024 | 08187-222332 |