ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಯ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಪ್ರಮುಖ ಇಲಾಖೆಗಳಲ್ಲಿ ಒಂದಾಗಿದ್ದು ಮಹಿಳೆಯರಲ್ಲಿ ಆರ್ಥಿಕ, ಸಾಮಾಜಿಕ, ರಾಜ್ಯಕೀಯ ಮತ್ತು ಸಾಂಸ್ಕೃತಿಕವಾಗಿ ಸಬಲೀಕರಣಗೊಳಿಸುವುದಾಗಿದೆ. ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿಗಾಗಿ ಘನ ಸರ್ಕಾರ ರೂಪಿಸಿರುವ ವಿವಿಧ ಯೋಜನೆಗಳನ್ನು, ಕಾರ್ಯ ನೀತಿಗಳನ್ನು, ಕಾಯ್ದೆಗಳನ್ನು ಅನುಷ್ಠಾಗೊಳಿಸಲಾಗುತ್ತಿದೆ.
- 0-6 ವರ್ಷದ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಬುನಾದಿ ಹಾಕುವುದಲ್ಲದೆ, ಪೂರಕ ಪೌಷ್ಠಿಕ ಆಹಾರ, ಅನೌಪಚಾರಿಕ ಶಾಲಾ ಪೂರ್ವ ಶಿಕ್ಷಣ, ಆರೋಗ್ಯ ಹಾಗೂ ಪೌಷ್ಠಿಕತೆಯ ಬಗ್ಗೆ ತಾಯಂದಿರಿಗೆ ಮತ್ತು ಪ್ರಾಯ ಪೂರ್ವ ಬಾಲಕಿಯರಿಗೆ ತರಬೇತಿ ಹಾಗೂ ಅರಿವು ಮೂಡಿಸುವುದರ ಬಗ್ಗೆ ಒತ್ತು ನೀಡುವುದು.
- ಬಾಲ್ಯ ವಿವಾಹವನ್ನು ತಡೆಗಟ್ಟುವುದು ಹಾಗೂ ಬಾಲ್ಯ ವಿವಾಹದಿಂದ ಆಗುವ ಪರಿಣಾಮದ ಬಗ್ಗೆ ಅರಿವು ಮೂಡಿಸುವುದು
- ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆ ತಡೆಗಟ್ಟುವುದು.
- ಕೌಟುಂಬಿಕ/ ಸಾಮಾಜಿಕ ಬೆಂಬಲವಿಲ್ಲದ, ಪ್ರತ್ಯೇಕ ಆದಾಯವಿಲ್ಲದ, ಖಂಡನೆಗಳಿಗೆ ಅವಕಾಶವಿರುವಂತಹ ಮಹಿಳೆಯರಿಗೆ ನೆರವು ಹಾಗೂ ಪುನರ್ವಸತಿ ಕಲ್ಪಿಸುವುದು.